ಕೋರೋನಾ ಕರಿನೆರಳಿನಿಂದ ಕಂಗೆಟ್ಟಿದ್ದ ಜನ ನೆಮ್ಮದಿಯ ನಿಟ್ಟುಸಿರು ಬಿಟ್ರು ಅನ್ನುವಷ್ಟರಲ್ಲಿ, ಇದೀಗ ಡೆಂಗ್ಯೂ ಆತಂಕ ಹುಟ್ಟಿಸಿದೆ.
ಬೆಂಗಳೂರು ನಗರವೊಂದರಲ್ಲಿಯೇ 2,000 ಕ್ಕೂ ಹೆಚ್ಚು ಡೆಂಗ್ಯೂ ಪ್ರಕರಣಗಳು ದೃಢಪಟ್ಟಿವೆ. ರಾಜ್ಯದಲ್ಲಿ 4,800 ಕ್ಕೂ ಹೆಚ್ಚು ಪ್ರಕರಣಗಳು ದೃಢಪಟ್ಟಿವೆ. ಆರೋಗ್ಯ ಇಲಾಖೆ ಡೆಂಗ್ಯೂ ಎದುರಿಸಲು ಎಲ್ಲ ಸಿದ್ಧತೆ ಮಾಡಿಕೊಂಡಿದ್ದರು ಸಹ, ಡೆಂಗ್ಯೂ ನಿಯಂತ್ರಣಕ್ಕೆ ಬರುತ್ತಿಲ್ಲ.
ಧಾರವಾಡ ಜಿಲ್ಲೆ ಸೇರಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಲ್ಲಿಯೂ ಡೆಂಗ್ಯೂ ಕಾಣಿಸಿಕೊಂಡಿದೆ. ಇದು ಕೇವಲ ಸರ್ಕಾರಿ ಆಸ್ಪತ್ರೆಗಳ ಅಂಕಿ ಅಂಶವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಇದರ ಸಂಖ್ಯೆ ಹೆಚ್ಚಿದೆ ಎನ್ನಲಾಗಿದೆ. ಕಲುಷಿತ ವಾತಾವರಣದಿಂದ ದೂರ ಇರುವಂತೆ ಮತ್ತು ಸ್ವಚ್ಛತೆ ಕಡೆಗೆ ಗಮನ ಹರಿಸಬೇಕಾಗಿದೆ.