ಧಾರವಾಡ ಜಿಲ್ಲಾ ನ್ಯಾಯಾಲಯದಲ್ಲಿ ಜಿಲ್ಲಾ ನ್ಯಾಯಾಲಯದ ಮುಖ್ಯ ಆಡಳಿತ ಅಧಿಕಾರಿ ಕೆ ಎನ್ ಮಾರಿಹಾಳಕರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.
ಜಿಲ್ಲಾ ನ್ಯಾಯಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಾರಿಹಾಳಕರ, ನ್ಯಾಯಾಲಯದಲ್ಲಿ ಎಲ್ಲರ ಮನಸ್ಸು ಗೆದ್ದಿದ್ದರು. ನ್ಯಾಯಾಲಯದಲ್ಲಿಯೇ ಎದೆ ನೋವಿನಿಂದ ಕುಸಿದು ಬಿದ್ದ ಅವರನ್ನು ತಕ್ಷಣ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ, ಅಷ್ಟೊತ್ತಿಗೆ ಅವರ ಪ್ರಾಣ ಪಕ್ಷಿ ಹಾರಿ ಹೋಗಿತ್ತು.
ಮಾರಿಹಾಳಕರ ಅವರಿಗೆ ಹೃದಯಾಘಾತವಾಗಿದೆ ಎಂಬ ಸುದ್ದಿ ತಿಳಿಯುತ್ತಿದ್ದಂತೆ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ಹಾಗೂ ಸಿಬ್ಬಂದಿ ವರ್ಗ, ಹಾಗೂ ವಕೀಲರು ಆಸ್ಪತ್ರೆಗೆ ದೌಡಾಯಿಸಿದ್ದರು.
ಮಾರಿಹಾಳಕರ ಅವರ ನಿಧನಕ್ಕೆ ಧಾರವಾಡ ಜಿಲ್ಲಾ ನ್ಯಾಯಾಲಯದ ಎಲ್ಲ ಗೌರವಾನ್ವಿತ ನ್ಯಾಯಾಧೀಶರು, ನ್ಯಾಯಾಲಯದ ಸಿಬ್ಬಂದಿ ವರ್ಗದವರು ಹಾಗೂ ವಕೀಲರು ಸಂತಾಪ ವ್ಯಕ್ತಪಡಿಸಿದ್ದಾರೆ.