ಎಸ್.ಸಿ ಹಾಗೂ ಎಸ್.ಟಿ ಸಮುದಾಯದ ಐ.ಎ.ಎಸ್ ಹಾಗೂ ಐ.ಆರ್.ಎಸ್ ಆಕಾಂಕ್ಷಿಗಳಿಗೆ ನೆರವಾಗುವ ಉದ್ದೇಶದಿಂದ ದೆಹಲಿಯಲ್ಲಿ ಹಾಸ್ಟೆಲ್ ಸ್ಥಾಪನೆ ಮಾಡಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಸಂಬಂಧ ತಕ್ಷಣ ಆದೇಶ ಹೊರಡಿಸಲು ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಹಾಸ್ಟೆಲ್ ನಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಾಗ್ರಿ ಖರೀದಿ ಹಾಗೂ ಇತರೆ ಖರ್ಚು ವೆಚ್ಚಗಳನ್ನು ಭರಿಸಲು ತಿಂಗಳಿಗೆ 15 ಸಾವಿರ ರೂಪಾಯಿ ಆರ್ಥಿಕ ನೆರವನ್ನು ಸರ್ಕಾರ ನೀಡಲಿದೆ.
ದೆಹಲಿಯಲ್ಲಿ ನಿರ್ಮಾಣವಾಗುವ ಹಾಸ್ಟೆಲ್ ನಲ್ಲಿ ಹೈಟೆಕ್ ಲೈಬ್ರೆರಿ ಸ್ಥಾಪನೆಯಾಗಲಿದ್ದು. ಅಲ್ಲಿ ವಿದ್ಯಾರ್ಥಿಗಳ ಪರೀಕ್ಷಾ ತಯಾರಿಗೆ ಅಗತ್ಯವಿರುವ ಎಲ್ಲಾ ಪುಸ್ತಕಗಳನ್ನು ಒದಗಿಸಲು ನಿರ್ಧರಿಸಲಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.