ರಾಜ್ಯದಲ್ಲಿ ದೊಡ್ಡ ಸುದ್ದಿ ಮಾಡಿದ್ದ PSI ಹುದ್ದೆ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆದರು ಸಹಾಯ ಆಯ್ಕೆ ಪಟ್ಟಿ ಬಿಡುಗಡೆ ವಿಳಂಬವಾಗುತ್ತಿದೆ.
ಜನೆವರಿ 23 ರಂದು 545 PSI ಹುದ್ದೆಗಳಿಗೆ ಮರು ಪರೀಕ್ಷೆ ನಡೆದಿತ್ತು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸಿತ್ತು. 28-03-2024 ರಂದು ಪರೀಕ್ಷಾ ಪ್ರಾಧಿಕಾರ ಗೃಹ ಇಲಾಖೆಗೆ ಅಂತಿಮ ಆಯ್ಕೆ ಪಟ್ಟಿ ಸಲ್ಲಿಸಿದೆ.
ಆಯ್ಕೆ ಪಟ್ಟಿ ನೀಡಿ ಮೂರು ತಿಂಗಳಾದರು ಸಹ, ಆಯ್ಕೆ ಪಟ್ಟಿ ಬಿಡುಗಡೆ ಮಾಡದಿರುವದಕ್ಕೆ ವಿಧ್ಯಾರ್ಥಿಗಳು ಆಕ್ರೋಶ ಹೊರಹಾಕಿದ್ದಾರೆ. PSI ಹುದ್ದೆಗಳಿಗೆ ನೇಮಕಾತಿ ಆರಂಭಗೊಂಡು ನಾಲ್ಕು ವರ್ಷಗಳು ಕಳೆದಿವೆ. ಸರ್ಕಾರ ಖಾಲಿ ಹುದ್ದೆಗಳನ್ನು ತುಂಬುತ್ತಿಲ್ಲ ಎಂದು AKSSA ಸಂಘಟನೆ ಸಿಟ್ಟು ಹೊರಹಾಕಿದೆ.