ರಷ್ಯಾ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಯವರಿಗೆ ಅದ್ದೂರಿ ಸ್ವಾಗತ ಸಿಕ್ಕಿದೆ.
ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ‘ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪೊಸ್ತಲ್’ ಪ್ರದಾನ ಮಾಡಿದರು.
ಭಾರತ ಹಾಗೂ ರಷ್ಯಾ ಎರಡು ದೇಶಗಳು ಉತ್ತಮ ಸ್ನೇಹ ಹೊಂದಿದ್ದು, ರಷ್ಯಾ ಮತ್ತು ಉಕ್ರೇನ್ ನಡುವೆ ನಡೆದ ಯುದ್ಧದ ಸಂದರ್ಭದಲ್ಲಿ, ಉಕ್ರೇನ್ ನಲ್ಲಿ ಸಿಕ್ಕಿಹಾಕಿಕೊಂಡಿದ್ದ ಭಾರತೀಯರನ್ನು ಸುರಕ್ಷತವಾಗಿ ಕರೆತರಲು ರಷ್ಯಾ ಸಹ ಸಹಕಾರ ನೀಡಿತ್ತು.