ಸಿ ಎಮ್ ಸಿದ್ದರಾಮಯ್ಯ, ಎರಡು ದಿನಗಳ ಕಾಲ ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಆಡಳಿತಕ್ಕೆ ಸಂಬಂಧಿಸಿದಂತೆ ಕೆಲವು ಮಹತ್ವದ ಸೂಚನೆ ನೀಡಿದ್ದಾರೆ.
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆ, ಸಾಗಾಣಿಕೆ ಮತ್ತು ದಾಸ್ತಾನು ಕುರಿತು ಹಲವಾರು ದೂರುಗಳು ಬರುತ್ತಿದ್ದು, ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಅಕ್ರಮ ಗಣಿಗಾರಿಕೆ ಮಾಡುವ ಮರಳು ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಬೇಕು ಎಂದು ಸಿ ಎಮ್ ಖಡಕ್ ಆದೇಶ ನೀಡಿದ್ದಾರೆ.
ಗ್ರಾಮ ಪಂಚಾಯತ್ ಮೂಲಕ ಮರಳು ಪೂರೈಕೆ ಮಾಡಲು ಈಗಾಗಲೇ ಗುರುತಿಸಲಾಗಿರುವ ಮರಳು ಬ್ಲಾಕ್‌ಗಳ ಮೂಲಕ ಮರಳು ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದಿರುವ ಅವರು, ರಾಜ್ಯದಲ್ಲಿ ಒಟ್ಟು 372 ಮರಳು ಬ್ಲಾಕ್‌ಗಳನ್ನು ಗುರುತಿಸಲಾಗಿದ್ದು, 102 ಮರಳು ಬ್ಲಾಕ್‌ಗಳು ಮಾತ್ರ ಕಾರ್ಯ ಪ್ರಾರಂಭಿಸಿವೆ. ಇನ್ನೂ 270 ಮರಳು ಬ್ಲಾಕ್‌ಗಳು ಕಾರ್ಯಾರಂಭ ಮಾಡಬೇಕಾಗಿದೆ.
ಕಲಬುರಗಿ, ದಾವಣಗೆರೆ, ಗದಗ ಜಿಲ್ಲೆಯಲ್ಲಿ ,ರಾಜಕೀಯ ನಾಯಕರ ನೆರಳಲ್ಲಿ ಆಕ್ರಮ ಮರಳು ಸಾಗಾಣಿಕೆಯಾಗುತ್ತಿದ್ದು, ಗದಗ ಜೆಲ್ಲೆಯ ರೋಣ ಹಾಗೂ ನರಗುಂದ ಭಾಗದಲ್ಲಿ ಆಕ್ರಮವಾಗಿ ಮರಳು ಗಣಿಗಾರಿಕೆ ಮಾಡಲಾಗುತ್ತಿದೆ.