ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಅಧೀನದಲ್ಲಿರುವ ಕರ್ನಾಟಕ ಮಾಧ್ಯಮ ಅಕಾಡೆಮಿಯ ಬೈಲಾದ ಕಂಡಿಕೆ 5(1) ಮತ್ತು 5(5)ರಲ್ಲಿ ಪ್ರದತ್ತವಾಗಿರುವ ಅಧಿಕಾರದನ್ವಯ ಕರ್ನಾಟಕ ಮಾಧ್ಯಮ ಅಕಾಡೆಮಿಗೆ ಅಧ್ಯಕ್ಷರು ಮತ್ತು ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ನೇಮಿಸಿ ಸರ್ಕಾರ ಆದೇಶ ಹೊರಡಿಸಿದೆ.
ಅಧ್ಯಕ್ಷರಾಗಿ ಆಯೇಷಾ ಖಾನಂ, ಸದಸ್ಯರಾಗಿ ಹಿರಿಯ ಪತ್ರಕರ್ತ ಚಿತ್ರದುರ್ಗದ ಎಂ.ಎನ್.ಅಹೋಬಳಪತಿ, ಖ್ಯಾತ ಛಾಯಾಗ್ರಾಹಕ, ಬೆಂಗಳೂರಿನ ಕೆ ವೆಂಕಟೇಶ್, ಕೊಪ್ಪಳದ ಹಿರಿಯ ಪತ್ರಕರ್ತ ಕೆ ನಿಂಗಜ್ಜ ಇವರನ್ನು ರಾಜ್ಯ ಸರ್ಕಾರ ಮಾಧ್ಯಮ ಅಕಾಡೆಮಿಗೆ ನೇಮಕ ಮಾಡಿ ಆದೇಶ ಹೊರಡಿಸಿದೆ