ಒಂದೇ ಸ್ಥಳದಲ್ಲಿ 5 ವರ್ಷಕ್ಕಿಂತ ಹೆಚ್ಚು ಸಮಯ ಕರ್ತವ್ಯ ನಿರ್ವಹಿಸುತ್ತಿರುವವರ ವಿರುದ್ಧ ಸಾರ್ವಜನಿಕರಿಂದ ದೂರುಗಳಿರುವವರ ಪಟ್ಟಿಯನ್ನು ಶೀಘ್ರದಲ್ಲಿ ನೀಡುವಂತೆ ಎಲ್ಲ ಜಿಲ್ಲಾಧಿಕಾರಿಗಳಿಗೂ ಸೂಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಕೆಲವು ಅಧಿಕಾರಿಗಳ ಬಗ್ಗೆ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬರುತ್ತಿದ್ದು, ಅಂತವರ ವರ್ಗಾವಣೆ ಮತ್ತು ನಿಯಮಾನುಸಾರ ಶಿಸ್ತು ಕ್ರಮ ಕೈಗೊಳ್ಳಲಾಗುವದು ಎಂದು ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.