ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಮದರಸಾಗಳಲ್ಲಿ ವಾರಕ್ಕೆ 2 ದಿನ ಕನ್ನಡ ಕಲಿಸುವ ಯೋಜನೆ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ.
ಪ್ರಾಯೋಗಿಕವಾಗಿ ಈ ಯೋಜನೆಯನ್ನು ಬೆಂಗಳೂರು, ವಿಜಯಪುರ, ರಾಯಚೂರು ಹಾಗೂ ಕಲಬುರಗಿಯ ಕೆಲ ಆಯ್ದ ಮದರಸಾಗಳಲ್ಲಿ ಶುರು ಮಾಡಲಾಗುವುದು ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತಿಳಿಸಿದ್ದಾರೆ.
ಮದರಸಾ ವಿಷಯಕ್ಕೆ ಸಂಬಂಧಿಸಿದಂತೆ ಆರೋಪ ಪ್ರತ್ಯಾರೋಪಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ತೆಗೆದುಕೊಂಡ ನಿರ್ಧಾರಕ್ಕೆ ಹರ್ಷ ವ್ಯಕ್ತವಾಗಿದೆ.