ಶೀಘ್ರದಲ್ಲೇ 7,500 ಪ್ರಾಥಮಿಕ, 2,500 ಪ್ರೌಢಶಾಲೆ ಶಿಕ್ಷಕರು ಸೇರಿದಂತೆ ಒಟ್ಟು 10,000 ಶಿಕ್ಷಕರ ನೇಮಕ ಮಾಡಲಾಗುವುದು ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ವಿಧಾನ ಪರಿಷತ್ ಕಲಾಪದಲ್ಲಿ ತಿಳಿಸಿದ್ದಾರೆ.
ಕೊರತೆ ಇರುವ ಶಿಕ್ಷಕರ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಕೊರತೆ ಇರುವ ಶಿಕ್ಷಕರ ಹುದ್ದೆ ಭರ್ತಿಗೆ ಸರ್ಕಾರ ಮುಂದಾಗಿದೆ ಎಂದರು.
ಇದೇ ವೇಳೆ ಭೂಮಾಪನ ಇಲಾಖೆಯಲ್ಲಿ ಖಾಲಿ ಇರುವ 750 ಭೂಮಾಪಕ ಹುದ್ದೆಗಳ ನೇಮಕ ಪ್ರಕ್ರಿಯೆಗೆ ಆದಷ್ಟು ಬೇಗನೆ ಚಾಲನೆ ನೀಡುವಂತೆ ಕರ್ನಾಟಕ ಲೋಕಸಭಾ ಆಯೋಗಕ್ಕೆ ಮನವಿ ಮಾಡಲಾಗುವುದು ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದರು.
