ರಾಜ್ಯದ ಎರಡನೇ ದೊಡ್ಡ ಮಹಾನಗರ ಹುಬ್ಬಳ್ಳಿ ಧಾರವಾಡದಲ್ಲಿ ಪೊಲೀಸ್ ಕಮಿಷನರೇಟ್ ಫುಲ್ ಆಕ್ಟಿವ್ ಆಗಿದೆ.
ಹುಬ್ಬಳ್ಳಿಯ ಬಿವಿಬಿ ಇಂಜಿನಿಯರಿಂಗ ಕಾಲೇಜಿನ ಸಭಾಂಗಣದಲ್ಲಿಂದು ಪೊಲೀಸ್ ಆಯುಕ್ತ ಎನ್ ಶಶಿಕುಮಾರ ಅವರು ಅಧಿಕಾರಿಗಳ ಸಭೆ ನಡೆಸಿದ್ರು.
ಮಹಿಳಾ ಮತ್ತು ಮಕ್ಕಳ ಸುರಕ್ಷತೆ, ಮಾದಕ ದ್ರವ್ಯಗಳು, ರೌಡಿಸಂ, ಸಾರ್ವಜನಿಕ ಸ್ನೇಹಿ ಪೊಲೀಸಿಂಗ್ ಸೇರಿದಂತೆ ಮುನ್ನೇಚ್ಚರಿಕೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸಮಗ್ರವಾಗಿ ಚರ್ಚಿಸಲಾಯಿತು. ಪೋಲಿಸ್ ಆಯುಕ್ತರು ಕೆಲವು ಸಲಹೆ ಸೂಚನೆಗಳನ್ನು ನೀಡಿದರು.