ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ಮೇಲೆ ಪತಿಯೊಬ್ಬ ಮನಸೋ ಇಚ್ಛೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ.
ಕೊಡಗಿನ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೋಪಣ್ಣ ಎಂಬಾತ ತನ್ನ ಪತ್ನಿ ಶಿಲ್ಪಾ ಎಂಬಾಕೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ಬಂದೂಕಿನೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ.
ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿದ್ದಾರೆ. ಘಟನೆ ಕುರಿತಂತೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.