Download Our App

Follow us

Home » ಕಾನೂನು » ಪತ್ನಿ ಮೇಲೆ ಗುಂಡು ಹಾರಿಸಿ ಕೊಲೆಗೈದ ಪತಿ, ಪೊಲೀಸರಿಗೆ ಶರಣು

ಪತ್ನಿ ಮೇಲೆ ಗುಂಡು ಹಾರಿಸಿ ಕೊಲೆಗೈದ ಪತಿ, ಪೊಲೀಸರಿಗೆ ಶರಣು

ಕ್ಷುಲ್ಲಕ ಕಾರಣಕ್ಕಾಗಿ ಪತ್ನಿ ಮೇಲೆ ಪತಿಯೊಬ್ಬ ಮನಸೋ ಇಚ್ಛೆ ಗುಂಡು ಹಾರಿಸಿ ಕೊಲೆ ಮಾಡಿದ ಘಟನೆ ಕೊಡಗಿನಲ್ಲಿ ನಡೆದಿದೆ.

ಕೊಡಗಿನ ವಿರಾಜಪೇಟೆ ಹೊರವಲಯದ ಬೇಟೋಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಬೋಪಣ್ಣ ಎಂಬಾತ ತನ್ನ ಪತ್ನಿ ಶಿಲ್ಪಾ ಎಂಬಾಕೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ಬಳಿಕ ಬಂದೂಕಿನೊಂದಿಗೆ ಠಾಣೆಗೆ ಬಂದು ಶರಣಾಗಿದ್ದಾನೆ. ​

ಶಿಲ್ಪಾ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದಾರೆ.. ಘಟನಾ ಸ್ಥಳಕ್ಕೆ ವಿರಾಜಪೇಟೆ ಪೋಲೀಸರು ಭೇಟಿ ನೀಡಿದ್ದಾರೆ. ಘಟನೆ ಕುರಿತಂತೆ ವಿರಾಜಪೇಟೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಕಳ್ಳತನವಾದ ಬಂಗಾರ ಪತ್ತೆ ಹಚ್ಚಿ ಮಹಿಳೆಗೆ ಹಸ್ತಾಂತರಿಸಿದ ಇನ್ಸಪೆಕ್ಟರ್ ದಯಾನಂದ

ಧಾರವಾಡದ ಹೊಸ ಬಸ್ ನಿಲ್ದಾಣ ಬಳಿ ಬಸ್ ಹತ್ತುವ ವೇಳೆ ಕಳ್ಳತನಾಗಿದ್ದ ವ್ಯಾನಿಟಿ ಬ್ಯಾಗನ್ನು ಪತ್ತೆ ಮಾಡಿ ಮರಳಿ ಮಹಿಳೆಗೆ ಒಪ್ಪಿಸಿದ ಘಟನೆ ಧಾರವಾಡದಲ್ಲಿ ನಡೆದಿದೆ.  30

Live Cricket

error: Content is protected !!