ಸರ್ಕಾರಿ ನೌಕರರು ಇನ್ನು ಮುಂದೆ ಆರ್‌ಎಸ್‌ಎಸ್ ಚಟುವಟಿಕೆಗಳಲ್ಲಿ ಭಾಗವಹಿಸಬಹುದು ಎಂದು ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ ಎಂದು ಬಾರ್ ಆಂಡ್ ಬೆಂಚ್ ಸುದ್ದಿ ಪ್ರಕಟಿಸಿದೆ.
ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಪಾಲ್ಗೊಳ್ಳದಂತೆ 1966 ರಲ್ಲಿ ಅಂದಿನ ಕೇಂದ್ರ ಸರ್ಕಾರ ನಿರ್ಬಂಧ ವಿಧಿಸಿತ್ತು.
1966ರಲ್ಲಿ ವಿಧಿಸಿದ್ದ ನಿರ್ಬಂಧವನ್ನು ಈಗ ತೆರವುಗೊಳಿಸಲಾಗಿದೆ. ಸರ್ಕಾರಿ ನೌಕರರು ಆರ್ ಎಸ್ ಎಸ್ ಚಟುವಟಿಕೆಯಲ್ಲಿ ಭಾಗವಹಿಸಬಹುದು ಎಂಬ ತೀರ್ಮಾನಕ್ಕೆ ಬಂದಿದೆ.
