ನಟ ದರ್ಶನ್ ಗೆ ನ್ಯಾಯಾಲಯದಲ್ಲಿ ಮತ್ತೆ ಹಿನ್ನೆಡೆಯಾಗಿದೆ. ಮನೆ ಊಟಕ್ಕಾಗಿ ಸಲ್ಲಿಸಿದ್ದ ಕೋರಿಕೆಯನ್ನು ನ್ಯಾಯಾಲಯ ತಿರಸ್ಕರಿಸಿದ್ದು, ಜೈಲೂಟವೆ ಗತಿಯಾಗಿದೆ.
ಜೈಲಿನಲ್ಲಿ ನೀಡಲಾಗುತ್ತಿರುವ ಆಹಾರ ಜೀರ್ಣಿಸಿಕೊಳ್ಳಲು ಆಗುತ್ತಿಲ್ಲ. ಜೈಲಿನ ಊಟದಿಂದಾಗಿ ಭೇದಿ ಆಗುತ್ತಿದೆ. ದೇಹದ ತೂಕ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆ ಆಹಾರ ತರಿಸಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶಿಸಬೇಕು ಎಂದು ದರ್ಶನ್ ನ್ಯಾಯಾಲಯಕ್ಕೆ ಕೋರಿದ್ದರು. ನ್ಯಾಯಾಲಯ ದರ್ಶನ್ ಕೋರಿಕೆಯನ್ನು ತಿರಸ್ಕರಿಸಿದೆ.