ಎರಡು ದಿನಗಳ ಹಿಂದೆ ಧಾರವಾಡ ಹೊರವಲಯದಲ್ಲಿ ನಡೆದಿದ್ದ ಹರೀಶ ಶಿಂಧೆ ಕೊಲೆ ಪ್ರಕರಣವನ್ನು ಧಾರವಾಡ ಗ್ರಾಮೀಣ ಪೊಲೀಸರು ಭೇದಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಲಾಗಿದೆ.
ಸರ್ಫರಾಜ್ ನವಲೂರ, ಸಾಹೀಲ್ ಬಂಧಿತ ಆರೋಪಿಗಳಾಗಿದ್ದು, ಈ ಇಬ್ಬರು ಹರೀಶ ಸ್ನೇಹಿತರಾಗಿದ್ದರು ಎನ್ನಲಾಗಿದೆ.
ಟೈಲ್ಸ್ ಕೆಲಸವನ್ನು ಮಾಡುತ್ತಿದ್ದ ಆರೋಪಿಗಳಿಗೆ ಮೃತ ಹರೀಶ್ ಸಾಲ ಕೊಟ್ಟಿದ್ದ ಎನ್ನಲಾಗಿದೆ. ಕೊಟ್ಟ ಸಾಲ ಕೇಳಿದ್ದಕ್ಕೆ ಕೊಲೆ ಮಾಡಲಾಗಿದೆ. ಹರೀಶನನ್ನು, ಧಾರವಾಡದ ಹೊರವಲಯಕ್ಕೆ ಊಟಕ್ಕೆ ಕರೆದುಕೊಂಡು ಹೋಗಿದ್ದ ಆರೋಪಿಗಳು ಕೊಲೆ ಮಾಡಿದ್ದರು.