ವಾಲ್ಮೀಕಿ ಹಗರಣ ಕುರಿತಂತೆ ವಿಪಕ್ಷ ಸದಸ್ಯರು ಸದನದ ಭಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದರೆ, ಮತ್ತೊಂದೆಡೆ ಸಿದ್ದರಾಮಯ್ಯ ಸರ್ಕಾರ, ಸದನದಲ್ಲಿ ಎರಡು ಮಹತ್ವದ ನಿರ್ಣಯಗಳನ್ನು ಅಂಗಿಕರಿಸಿದೆ.
ಒಂದು ರಾಷ್ಟ್ರ ಒಂದು ಚುನಾವಣೆಗೆ ವಿರೋದ ವ್ಯಕ್ತಪಡಿಸಿರುವ ಸರ್ಕಾರ, ಒಕ್ಕೂಟ ವ್ಯವಸ್ಥೆಗೆ ಇದು ಅಪಾಯಕಾರಿಯಾಗಿದೆ. ರಾಜ್ಯದ ಹಿತಾಸಕ್ತಿಗೆ ಇದು ಅಪಾಯ ತಂದೊಡ್ದುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ರಾಜ್ಯ ಕಾಂಗ್ರೇಸ್ ಸರ್ಕಾರ ಬಲವಾಗಿ ವಿರೋದಿಸಿದೆ. ಕೇಂದ್ರದ ನಿರ್ಧಾರಕ್ಕೆ ವಿರೋಧಿಸಿ ಸದನದಲ್ಲಿ ನಿರ್ಣಯ ಅಂಗಿಕರಿಸಿದೆ.
ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸುವ ನೀಟ ಪರೀಕ್ಷೆಯಲ್ಲಿ ನಡೆದ ಹಗರಣ ರಾಷ್ಟ್ರವ್ಯಾಪಿ ಸುದ್ದಿ ಮಾಡಿದೆ. ಇದರಿಂದ ಕರ್ನಾಟಕದ ವಿಧ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಕರ್ನಾಟಕಕ್ಕೆ ನೀಟ್ ಪರೀಕ್ಷೆಯಿಂದ ವಿನಾಯ್ತಿ ನೀಡಬೇಕು ಹಾಗೂ ಈ ಮೊದಲಿನಂತೆ ಸಾಮಾನ್ಯ ಪ್ರವೇಶ ಪರೀಕ್ಷೆಯ ಅಂಕಗಳ ಆಧಾರದ ಮೇಲೆ ಪ್ರವೇಶ ನೀಡುವ ಸಂಬಂಧ ಸದನದಲ್ಲಿ ನಿರ್ಣಯ ಅಂಗಿಕರಿಸಲಾಗಿದೆ.