ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳ ಹೆಸರು ಬದಲಾವಣೆಗೆ ರಾಜ್ಯ ಸರ್ಕಾರ ನಾಗರಿಕ ವಿಮಾನಯಾನ ಸಚಿವಾಲಯಕ್ಕೆ ಪತ್ರ ಬರೆದಿದೆ
ಕರ್ನಾಟಕದ ನಾಲ್ಕು ವಿಮಾನ ನಿಲ್ದಾಣಗಳಿಗೆ ಹೆಸರು ಇಡುವಂತೆ ರಾಜ್ಯ ಸರ್ಕಾರ ಪತ್ರ ಬರೆದಿದ್ದು, ಸಂಪುಟ ಸಭೆಯಲ್ಲಿ ಚರ್ಚಿಸಿ ಹೆಸರು ಬದಲಾವಣೆ ಬಗ್ಗೆ ನಿರ್ಧಾರ ಪ್ರಕಟ ಮಾಡುವದಾಗಿ ಕೇಂದ್ರ ನಾಗರಿಕ ವಿಮಾನಯಾನ ಸಚಿವರು ತಿಳಿಸಿದ್ದಾರೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೋಳ್ಳಿ ರಾಯಣ್ಣ, ಬೆಳಗಾವಿಗೆ ಕಿತ್ತೂರ ರಾಣಿ ಚೆನ್ನಮ್ಮ, ವಿಜಯಪುರದ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ, ಶಿವಮೊಗ್ಗದ ವಿಮಾನ ನಿಲ್ದಾಣಕ್ಕೆ ಕುವೆಂಪುರವರ ಹೆಸರಿಡುವಂತೆ ಕೇಂದ್ರಕ್ಕೆ ಪತ್ರ ಬರೆದಿದೆ.
2023 ರಲ್ಲಿ ನಡೆದ ಅಧಿವೇಶನದಲ್ಲಿ ಹುಬ್ಬಳ್ಳಿ ಹಾಗೂ ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕ್ರಮವಾಗಿ ಸಂಗೋಳ್ಳಿ ರಾಯಣ್ಣ ಹಾಗೂ ಕಿತ್ತೂರ ರಾಣಿ ಚೆನ್ನಮ್ಮ ಹೆಸರು ಇಡಲು ತೀರ್ಮಾನ ತೆಗೆದುಕೊಂಡಿತ್ತು.
