ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸರ ಬಂದೂಕು ಸದ್ದು ಮಾಡಿದೆ. ಕುಖ್ಯಾತ ಅಂತರಾಜ್ಯ ಕಳ್ಳ, ದರೋಡೆಕೋರ, ಫರ್ಹಾನ್ ಅಹ್ಮದ್ ಕಾಲಿಗೆ ಗುಂಡು ಹಾರಿಸಲಾಗಿದೆ.
ಮುಂಬೈ ಮೂಲದ ಫರ್ಹಾನ್ ಶೇಖ್ ವಿರುದ್ಧ ಕೇಶ್ವಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನದ ಪ್ರಕರಣ ದಾಖಲಾಗಿತ್ತು. ಇದಲ್ಲದೇ ಹೈದರಾಬಾದ್, ಗುಲ್ಬರ್ಗ, ಅಹ್ಮದ್ ನಗರ, ಸೂರತ್ ಮತ್ತು ಮುಂಬೈನಲ್ಲಿ ರಾಬರಿ ಹಾಗೂ ಕೊಲೆ ಯತ್ನ ಪ್ರಕರಣಗಳಲ್ಲಿ ಕುಖ್ಯಾತಿಗಳಿಸಿದ್ದ ಫರ್ಹಾನ್ ನನ್ನು ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು.
ಈತನ ಇತರೆ ಸಹಚರರನ್ನು ಬಂಧಿಸಲು ಪೊಲೀಸರು ಮುಂದಾದಾಗ ಫರ್ಹಾನ್, ಪೊಲೀಸರ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಪೊಲೀಸರು ಆತ್ಮ ರಕ್ಷಣೆಗಾಗಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದರು, ಓಡಲು ಯತ್ನಿಸಿದ ಫರ್ಹಾನ್ ಕಾಲಿಗೆ ಪಿ ಎಸ್ ಐ ಕವಿತಾ ಗುಂಡು ಹಾರಿಸಿದ್ದಾರೆ.
ಸಧ್ಯ ಗಾಯಗೊಂಡಿರುವ ಫರ್ಹಾನ್ ನನ್ನು ಕಿಮ್ಸ್ ಆಸ್ಪತ್ರೆಗೆ ಧಾಖಲಿಸಲಾಗಿದೆ. ಆರೋಪಿಯಿಂದ ಹಲ್ಲೆಗೊಳಗಾದ ಪೊಲೀಸರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.
