ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಇಂದು ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸಭೆ ನಡೆಸಿದ್ರು.
ಮಲ್ಲಿಕಾರ್ಜುನ ಖರ್ಗೆಯವರ ಮನೆಯಲ್ಲಿ ನಡೆದ ಸಭೆಯಲ್ಲಿ ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ.ಸಿ. ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಭಾಗವಹಿಸಿದ್ದರು.
ಸಭೆಯಲ್ಲಿ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆ ಬಗ್ಗೆ ಚರ್ಚೆ ನಡೆದಿದೆ ಎಂದು ಹೇಳಲಾಗಿದೆ.
ಮೂಡಾ ಹಗರಣ, ವಾಲ್ಮೀಕಿ ಹಗರಣದ ಕುರಿತು ವಿಪಕ್ಷ ಬಿಜೆಪಿ ಹೋರಾಟ ಕೈಗೆತ್ತಿಕೊಂಡಿದ್ದು, ಇದಕ್ಕೆ ಪರ್ಯಾಯವಾಗಿ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆದಿದೆ ಎನ್ನಲಾಗಿದೆ.
