ಕರ್ನಾಟಕ ಲೋಕ ಸೇವಾ ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ 27-08-2024 ರಂದು ನಡೆಸಲು ನಿರ್ಧರಿಸಿದೆ.
ಈ ಹಿಂದೆ KAS ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್ 25 ಕ್ಕೆ ನಡೆಸಲು ದಿನಾಂಕ ನಿಗದಿ ಮಾಡಲಾಗಿತ್ತು. ಅಂದು ಐ.ಬಿ.ಪಿ.ಎಸ್. ಪರೀಕ್ಷೆ ಇದ್ದ ಕಾರಣ, ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸಿ, ಇದೀಗ 25 ರ ಬದಲಾಗಿ 27 ರಂದು ನಡೆಸಲು ತೀರ್ಮಾನಿಸಲಾಗಿದೆ.
ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪರೀಕ್ಷಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿದೆ. ದಿನಾಂಕ:15-08-2024 ರ ನಂತರ ಪ್ರವೇಶ ಪತ್ರವನ್ನು ಆಯೋಗದ ಅಂತರ್ಜಾಲದಿಂದ ಡೌನ್ ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಲೋಕಸೇವಾ ಆಯೋಗ ತಿಳಿಸಿದೆ.
