ತಾಲೂಕ ಪಂಚಾಯತ ಹಾಗೂ ಜಿಲ್ಲಾ ಪಂಚಾಯತಿಗಳ ಕ್ಷೇತ್ರ ಪುನರ ವಿಂಗಡಣೆ ಜೊತೆ ಮೀಸಲಾತಿ ಪ್ರಕಟ ಮಾಡುವಲ್ಲಿ ಎಡವಿದ ಸರ್ಕಾರಕ್ಕೆ ಹೈಕೋರ್ಟ ಇಂದು ಚಾಟಿ ಬೀಸಿದೆ.
ನ್ಯಾಯಾಂಗ ನಿಂದನೆ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟನ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜರಿಯಾ ಹಾಗೂ ನ್ಯಾಯಮೂರ್ತಿ ಕೆ ವಿ ಅರವಿಂದ ಅವರ ನೇತೃತ್ವದ ವಿಭಾಗೀಯ ಪೀಠ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತು.
ಕಳೆದ ನಾಲ್ಕು ವರ್ಷಗಳಿಂದ ತಾಪಂ ಹಾಗೂ ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಸುವಲ್ಲಿ ಸರ್ಕಾರ ಎಡವಿದ್ದನ್ನು ಪ್ರಶ್ನಿಸಿದ ವಿಭಾಗೀಯ ಪೀಠ ಆಶ್ಚರ್ಯ ವ್ಯಕ್ತಪಡಿಸಿತು. ಅಧಿಕಾರ ವೀಕೆಂದ್ರಿಕರಣದ ಮೂಲಕ ಸ್ಥಳೀಯ ಸಂಸ್ಥೆಗಳಿಗೆ ಸ್ವಾಯತ್ತತೆ ನೀಡಬೇಕು ಎಂದು ಹೇಳಿತು.
ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೋಕೇಟ್ ಜನರಲ್ ಪ್ರತಿಮಾ ಹೊನ್ನಾಪುರ ಸಮಜಾಯಿಸಿ ನೀಡಿ, ಮೀಸಲಾತಿ ಪ್ರಕ್ರಿಯೆ ಆರಂಭವಾಗಿದ್ದು, ನಾಲ್ಕು ವಾರಗಳ ಸಮಯಾವಕಾಶ ಕೋರಿದರು.
ರಾಜ್ಯದ 31 ಜಿಲ್ಲಾ ಪಂಚಾಯತಿಗಳಿಗೆ ಚುನಾವಣೆ ನಡೆಸಲು ಸರ್ಕಾರ ಭರದ ಸಿದ್ಧತೆ ನಡೆಸಿದ್ದು, ಇನ್ನು ಒಂದು ತಿಂಗಳ ಅವಧಿಯಲ್ಲಿ ಚುನಾವಣೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ.
