ರಾಜ್ಯ ಮಹಿಳಾ ಕಾಂಗ್ರೇಸ್ ಅಧ್ಯಕ್ಷೆಯಾಗಿ ಮಾಜಿ ಶಾಸಕಿ ಸೌಮ್ಯ ರೆಡ್ಡಿಯವರನ್ನು ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರ ಸುಪುತ್ರಿಯಾಗಿರುವ ಸೌಮ್ಯ ರೆಡ್ಡಿ ಮೊನ್ನೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲು ಅನುಭವಿಸಿದ್ದರು.
ಮಹಿಳಾ ಕಾಂಗ್ರೇಸ್ ಅಧ್ಯಕ್ಷೆ ಹುದ್ದೆ ಉತ್ತರ ಕರ್ನಾಟಕದ ಪಾಲಾಗುತ್ತದೆ ಎಂದು ಹೇಳಲಾಗಿತ್ತು. ಹುನಗುಂದದ ಶಾಸಕ ವಿಜಯಾನಂದ ಕಾಶಪ್ಪನವರ ಅವರ ಧರ್ಮಪತ್ನಿ ವೀಣಾ ಕಾಶಪ್ಪನವರ ರೇಸ್ ನಲ್ಲಿದ್ದರು.
ಆದರೆ ಹೈಕಮಾಂಡ ಸೌಮ್ಯ ರೆಡ್ಡಿಗೆ ಮನಿ ಹಾಕಿದ್ದು, ಉತ್ತರ ಕರ್ನಾಟಕದ ಕಾಂಗ್ರೇಸ್ ಮಹಿಳಾ ನಾಯಕಿಯರ ಅಸಮಾಧಾನಕ್ಕೆ ಕಾರಣವಾಗಿದೆ.
