ಬೆಳಗಾವಿ ರಾಜಕಾರಣದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಸೊಸೆ ಡಾ, ಹಿತಾ, ಇದೀಗ ಕ್ಷೇತ್ರದಾಧ್ಯಂತ ಜನರ ದುಃಖ್ ದುಮ್ಮಾನ ಆಲಿಸುತ್ತಿದ್ದಾರೆ.
ಶಾರ್ಟ್ ಸರ್ಕ್ಯೂಟ್ ನಿಂದ ಬೆಳಗಾವಿಯ ನಾವಗೆ ಕೈಗಾರಿಕಾ ಪ್ರದೇಶದಲ್ಲಿರುವ ಇನ್ಸುಲೆನ್ ಟೇಪ್ ತಯಾರಿಸುವ ಸ್ನೇಹಂ ಕಾರ್ಖಾನೆಯಲ್ಲಿ ಸಂಭವಿಸಿದ ಬೆಂಕಿ ದುರಂತದ ಘಟನಾ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಿದ್ದಾರೆ.
ಲಕ್ಷ್ಮೀ ಹೆಬ್ಬಾಳಕರ ಅನುಪಸ್ಥಿತಿಯಲ್ಲಿ ಸೊಸೆ ಡಾ. ಹಿತಾ ಮೃಣಾಲ್ ಹೆಬ್ಬಾಳಕರ್ ಘಟನೆ ನಡೆದಿರುವ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದಿದ್ದು, ಕಾರ್ಖಾನೆಯಲ್ಲಿ ಸಿಲುಕಿ ಹಾಕಿಕೊಂಡ ಕಾರ್ಮಿಕರ ಕುಟುಂಬಗಳ ಜೊತೆ ನಾವಿದ್ದೇವೆ ಎಂದು ಧೈರ್ಯ ತುಂಬಿದ್ದಾರೆ.
ಬೆಳಗಾವಿಯ ರಾಜಕಾರಣದ ಅಂಗಳದಲ್ಲಿ ಮತ್ತೊಂದು ಪ್ರತಿಷ್ಟಿತ ಮನೆತನದ ಕುಡಿ ಎಂಟ್ರಿ ಕೊಟ್ಟಿದ್ದು, ಡಾ. ಹಿತಾ, ಅತ್ತೆ ಲಕ್ಷ್ಮೀ ಹೆಬ್ಬಾಳಕರ ಅವರ ಕೆಲಸದಲ್ಲಿ ಸಾಥ ನೀಡುತ್ತಿದ್ದಾರೆ.
