ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗದವರನ್ನು, ವ್ಯವಸ್ಥಿತವಾಗಿ ತುಳಿಯುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ಧಾರವಾಡ ಜಿಲ್ಲಾ ಮಟ್ಟದ ತ್ರೈಮಾಸಿಕ ಕೆಡಿಪಿ ಸಭೆಗೆ ಸರ್ಕಾರ 5 ಜನರನ್ನು ನೇಮಕ ಮಾಡಿದ ಬೆನ್ನಲ್ಲೇ ಶಾಸಕ ಎನ್ ಎಚ್ ಕೋನರೆಡ್ಡಿಯವರ ಮೇಲೆ ಗಂಭೀರ ಆರೋಪ ಕೇಳಿ ಬಂದಿದೆ.
ಹಿಂದುಳಿದ ವರ್ಗದ ಮೀಸಲಾತಿಯಲ್ಲಿ ಶಾಸಕ ಎನ್ ಎಚ್ ಕೋನರೆಡ್ಡಿಯವರ ಸಹೋದರ ಆರ್ ಎಚ್ ಕೋನರೆಡ್ಡಿ ಸ್ಥಾನ ಪಡೆದಿದ್ದು, ಹಿಂದುಳಿದ ವರ್ಗಗಳ ಒಕ್ಕೂಟದ ಕಣ್ಣು ಕೆಂಪಾಗಿಸಿದೆ.
ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಮೀಸಲಾತಿಯನ್ನು ಕಸಿದು ಮೇಲ್ವರ್ಗದವರಿಗೆ ಕೆಡಿಪಿ ಸದಸ್ಯರನ್ನಾಗಿ ಮಾಡಲಾಗಿದೆ ಎಂದು ರಾಜ್ಯ ಹಿಂದುಳಿದ ವರ್ಗಗಳ ಒಕ್ಕೂಟದ ಅಧ್ಯಕ್ಷ ಕೆ ಎಂ ರಾಮಚಂದ್ರಪ್ಪ ಅವರಿಗೆ, ಧಾರವಾಡ ಜಿಲ್ಲಾ ಕುರುಬರ ಸಂಘ ದೂರು ನೀಡಿದೆ.
ಹಿಂದುಳಿದ ವರ್ಗದವರಿಗೆ ಅನ್ಯಾಯ ಮಾಡಲಾಗುತ್ತಿದೆ ಎಂದು ಆರೋಪಿಸಿ ಕೆಡಿಪಿ ಸದಸ್ಯರ ನೇಮಕ ಪತ್ರ ವೈರಲ್ ಆಗಿದ್ದು, ಜಿಲ್ಲೆಯ ರಾಜಕಾರಣದಲ್ಲಿ ಬಿಸಿ ಬಿಸಿ ಚರ್ಚೆಯಾಗುತ್ತಿದೆ.