Download Our App

Follow us

Search
Close this search box.
Home » ಕರ್ನಾಟಕ » ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಕ್ಷಮಾಪಣೆ ಪತ್ರ. ಅರವಿಂದ ಬೆಲ್ಲದ ಮೌಲ್ಯಯುತ ರಾಜಕಾರಣದ ಸಂಕೇತ. ಚಂದ್ರಕಾಂತ ಬೆಲ್ಲದ ಅವರು ಸಜ್ಜನ ರಾಜಕಾರಣಿ / ಸಿದ್ದರಾಮಯ್ಯ ಶ್ಲಾಘನೆ

ಉದ್ವೇಗದಲ್ಲಿ ಬಳಸಿದ ಪದಗಳ ಬಗ್ಗೆ ಕ್ಷಮಾಪಣೆ ಕೇಳಿರುವ ಶಾಸಕ ಅರವಿಂದ ಬೆಲ್ಲದರ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಂಡಾಡಿದ್ದಾರೆ. 

ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. 

ಜಿಂದಾಲ್‌ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರ್ಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್‌ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. 

ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಸಿದ್ದರಾಮಯ್ಯನವರು ತಿಳಿಸಿದ್ದಾರೆ. 

ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲವೆಂಬುದನ್ನು ಈ ಮೂಲಕ ತಿಳಿಸಬಯಸುತ್ತೇನೆ ಎಂದು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

ನಾನು ಸಹ ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. 

ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ, ಚಾರಿತ್ರ್ಯಹನನ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆ. 

ಮೊದಲ ಬಾರಿಗೆ ಅರವಿಂದ ಬೆಲ್ಲದ್‌ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ ಎಂದು ಕೊಂಡಾಡಿದ್ದಾರೆ.

ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ ಎಂದು ಹಾರೈಸುತ್ತೇನೆ. 

ರಾಜಕೀಯವು ಬರೀ ಟೀಕೆ, ಆರೋಪ-ಪ್ರತ್ಯಾರೋಪಗಳಿಂದಲೇ ತುಂಬಿಹೋಗುತ್ತಿರುವ ಈ ಕಾಲದಲ್ಲಿ ಅರವಿಂದ ಬೆಲ್ಲದ್‌ ಅವರ ನಡೆ ಮೌಲ್ಯಯುತ ರಾಜಕಾರಣದ ಜೀವಂತಿಕೆಯ ಸಂಕೇತವಾಗಿ ಕಾಣುತ್ತಿದೆ.

“ಪಶ್ಚಾತಾಪಕ್ಕಿಂತ ದೊಡ್ಡ ಪ್ರಾಯಶ್ಚಿತ ಬೇರೊಂದಿಲ್ಲ” ಎಂಬ ಮಾತು ಈ ಸಂದರ್ಭಕ್ಕೆ ಹೆಚ್ಚು ಅರ್ಥಪೂರ್ಣವೆನಿಸುತ್ತಿದೆ ಎಂದು ಸಿದ್ದರಾಮಯ್ಯನವರು, ಅರವಿಂದ ಬೆಲ್ಲದರ ನಡೆಯನ್ನು ಶ್ಲಾಘಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

Top Headlines

ಶಮನಗೊಂಡ ಶಿಗ್ಗಾವಿ ಕಾಂಗ್ರೇಸ್ಸಿನ ಆಂತರಿಕ ಸಮರ. ಪಠಾಣ ಗೆಲ್ಲಿಸಿಕೊಂಡು ಬಂದಲ್ಲಿ ಖಾದ್ರಿಗೆ ಒಲಿಯಲಿದೆ ಎಂ ಎಲ್ ಸಿ ಸ್ಥಾನ

ಹಾವೇರಿ ಜಿಲ್ಲೆಯ ಶಿಗ್ಗಾವಿ ಉಪ ಚುನಾವಣಾ ಕಣ ದಿನದಿಂದ ದಿನಕ್ಕೆ ಸಂಚಲನ ಮೂಡಿಸುತ್ತಿದೆ. ಯಾಸಿರ್ ಖಾನ್ ಪಠಾಣ ಕಾಂಗ್ರೇಸ್ ಅಭ್ಯರ್ಥಿಯಾಗಿ ಘೋಷಣೆಯಾದ ಬೆನ್ನಲ್ಲೇ ಬಂಡೆದಿದ್ದ ಮಾಜಿ ಶಾಸಕ

Live Cricket

error: Content is protected !!