ಕೆಎಸ್‌ಆರ್‌ಟಿಸಿ ಬಸ್‌ಗೆ ಲಾಯಲಾ ಶಾಲೆಯ ಬಸ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಶಾಲಾ ಮಕ್ಕಳು ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿಯಲ್ಲಿ ನಡೆದಿದೆ.
ಘಟನೆಯಲ್ಲಿ ಇಬ್ಬರು ಮಕ್ಕಳು ಬಲಿಯಾಗಿದ್ದು, 10 ಕ್ಕೂ ಹೆಚ್ಚು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ಧಾಖಲಿಸಲಾಗಿದೆ.
ಶಿಕ್ಷಕರ ದಿನಾಚರಣೆಯ ಕಾರ್ಯಕ್ರಮ ಮುಗಿಸಿ ಶಾಲಾ ಬಸ್ಸಿನಲ್ಲಿ ಮನೆಗೆ ಮರಳುತ್ತಿರುವಾಗ ಈ ದುರ್ಘಟನೆ ನಡೆದಿದೆ.
ಶಿಕ್ಷಕರ ದಿನಾಚರಣೆಯ ದಿನವೇ ರಾಯಚೂರು ಜಿಲ್ಲೆಯ ಮಾನವಿ ತಾಲೂಕಿನ ಕಪಗಲ್ ಬಳಿ ಶಾಲಾ ಮಕ್ಕಳ ಬಸ್ ಅಪಘಾತದ ಸುದ್ದಿ ಕೇಳಿ ಪಾಲಕರು ಆಘಾತಗೊಂಡಿದ್ದು, ಗಾಯಗೊಂಡ ಮಕ್ಕಳು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಜನ ಪ್ರಾರ್ಥಿಸಿದ್ದಾರೆ.