ಕೇಂದ್ರದ ಪ್ರಭಾವಿ ಸಚಿವ ಪ್ರಲ್ಲಾದ ಜೋಶಿ ಕ್ಷೇತ್ರದ ಜನರಿಗೆ ಮತ್ತೊಂದು ಕೊಡುಗೆ ನೀಡಿದ್ದಾರೆ.
ಶೀಘ್ರದಲ್ಲಿ ಹುಬ್ಬಳ್ಳಿ ಮತ್ತು ಪುಣೆ ನಡುವೆ ವಂದೇ ಭಾರತ ಎಕ್ಸಪ್ರೆಸ್ ರೈಲು ಸಂಚಾರ ಆರಂಭಿಸಲಿದೆ. ಇದಕ್ಕೆ ರೈಲ್ವೇ ಸಚಿವರು ಒಪ್ಪಿಗೆ ನೀಡಿದ್ದಾರೆ ಎಂದು ಜೋಶಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಪುಣೆ ಸಂಪರ್ಕವು ವಾಣಿಜ್ಯ ಮತ್ತು ಕೈಗಾರಿಕಾ ಚಟುವಟಿಕೆಗಳನ್ನು ಹೆಚ್ಚಿಸುತ್ತದೆ, ಇದು ಅಭಿವೃದ್ಧಿಗೆ ಕಾರಣವಾಗುತ್ತದೆ ಎಂದು ಹೇಳಿರುವ ಪ್ರಲ್ಲಾದ ಜೋಶಿ, ಈ ಸಂಬಂಧ ಕೇಂದ್ರ ರೈಲ್ವೆ ಸಚಿವರಾದ ಅಶ್ವಿನಿ ವೈಷ್ಣವ್ ಅವರಿಗೆ ಜುಲೈನಲ್ಲಿ ಪತ್ರದ ಮೂಲಕ ಮನವಿ ಮಾಡಿದ್ದರು.
ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಜೋಶಿಯವರ ಮನವಿಗೆ ಸ್ಪಂಧಿಸಿದ್ದು, ಜೋಶಿ ಕ್ಷೇತ್ರದ ಜನರ ಬೇಡಿಕೆ ಈಡೇರಿಸಿದ್ದಾರೆ.
