ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಿರುವ ಆರೋಪ ಪಟ್ಟಿ & ಅದಕ್ಕೆ ಪೂರಕವಾದ ಇತರೆ ಯಾವುದೇ ಅಂಶಗಳನ್ನು ಪ್ರಸಾರ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಲು ಕೇಂದ್ರ ಸರ್ಕಾರಕ್ಕೆ ಆದೇಶಿಸಬೇಕು ಎಂದು ಕೋರಿ ನಟ ದರ್ಶನ್ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಕೈಗೆತ್ತಿಕೊಳ್ಳಲಿದೆ.
ಮೊನ್ನೆಯಷ್ಟೇ ಪೊಲೀಸರು ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಮಾಧ್ಯಮದಲ್ಲಿ ಪ್ರಸಾರ ಮಾಡದಂತೆ ಇದೀಗ ಕೋರ್ಟ್ ಮೆಟ್ಟಲೇರಿದ್ದಾರೆ.
