ರಾಜ್ಯ ಸರಕಾರದ ಕಂದಾಯ ಇಲಾಖೆಯಿಂದ ಪ್ರಸಕ್ತ ಸಾಲಿನ ಅತ್ಯುತ್ತಮ ಜಿಲ್ಲಾಧಿಕಾರಿ ಪ್ರಶಸ್ತಿ ಪುರಸ್ಕೃತರಾದ ಧಾರವಾಡ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರನ್ನು, ಶಾಸಕ ಅರವಿಂದ ಬೆಲ್ಲದ ಅವರು ಸನ್ಮಾನಿಸಿದರು.
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಮಧ್ಯಾಹ್ನ ಧಾರವಾಡ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ವಿಧಾನಸಭೆ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ ಅವರು ಗೌರವಿಸಿ, ದಿವ್ಯ ಪ್ರಭು ಅವರನ್ನು ಜಿಲ್ಲೆಯ ಜನರ ಪರವಾಗಿ ಅಭಿನಂಧಿಸಿದರು.