ಬೆಂಗಳೂರಿನಿಂದ ಮಂಡ್ಯದ ಕಡೆಗೆ ಹೊರಟಿದ್ದ ಕೆ ಎಸ್ ಆರ್ ಟಿ ಸಿ ಬಸ್ಸು ನಿಂತಿದ್ದ ಕಂಟೆನರ್ ವಾಹನಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ನಡೆದಿದೆ.
ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿರುವ ಸ್ಯಾಂಜೋ ಆಸ್ಪತ್ರೆ ಬಳಿ ಈ ಘಟನೆ ನಡೆದಿದ್ದು, 20 ಕ್ಕೂ ಹೆಚ್ಚು ಜನರ ಸ್ಥಿತಿ ಚಿಂತಾಜನಕವಾಗಿದೆ.
ಗಾಯಾಳುಗಳನ್ನು ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ಧಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ. ಮಂಡ್ಯ ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.