ನವಲಗುಂದದಲ್ಲಿರುವ ವಿದ್ಯಾಜ್ಯೋತಿ ವಸತಿ ಶಾಲೆಯನ್ನು ಅನಧಿಕೃತವಾಗಿ ನಡೆಸಲಾಗುತ್ತಿದ್ದು, ಆ ಶಾಲೆಯ ಮೇಲೆ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಕರುನಾಡ ವಿಜಯಸೇನೆ ಆಗ್ರಹಿಸಿದೆ.
ಈ ಸಂಬಂಧ ಶಿಕ್ಷಣ ಸಚಿವ ಮಧು ಬಂಗಾರಪ್ಪನವರಿಗೆ ಮನವಿ ನೀಡಿರುವ ಕುಮಾರ ಲಕ್ಕಮ್ಮನವರ, ನಾಲ್ಕು ವರ್ಷಗಳಿಂದ ಹೋರಾಟ ಮಾಡಿದರು, ಅಧಿಕಾರಿಗಳು ಸ್ಪಂಧನೆ ಮಾಡುತ್ತಿಲ್ಲ ಎಂದು ಸಚಿವರ ಗಮನಕ್ಕೆ ತಂದರು.
ಶಿಕ್ಷಣ ಇಲಾಖೆಯ ಅನುಮತಿ ಪಡೆಯದೆ ವಸತಿ ಶಾಲೆ ನಡೆಸಲಾಗುತ್ತಿದ್ದು, ಮಕ್ಕಳಿಂದ ಹಣ ವಸೂಲಿ ಮಾಡಲಾಗುತ್ತಿದೆ. ಅಲ್ಲದೇ ಈ ಶಾಲೆಯ ವಿರುದ್ಧ ಕ್ರಮ ತೆಗೆದುಕೊಳ್ಳದ ಡಿಡಿಪಿಐಯವರನ್ನು ಅಮಾನತ್ತು ಮಾಡಬೇಕೆಂದು ಕುಮಾರ ಆಗ್ರಹಿಸಿದ್ದಾರೆ.
