ತೀವ್ರ ಕುತೂಹಲ ಮೂಡಿಸಿದ್ದ ಶಿಗ್ಗಾವಿ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೇಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ ಸ್ಪರ್ಧೆ ಮಾಡಲಿದ್ದಾರೆ.
ಕಳೆದ ಸಲದ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ ವಿರುದ್ಧ ಸ್ಪರ್ಧೆ ಮಾಡಿದ್ದ ಯಾಸಿರ್ ಖಾನ್ ಪಠಾಣ ಈ ಸಲ ಬಿಜೆಪಿ ಅಭ್ಯರ್ಥಿಯಾಗಿರುವ ಭರತ ಬೊಮ್ಮಾಯಿಯನ್ನು ಎದುರಿಸಲಿದ್ದಾರೆ.
ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಿರುವ ಯಾಸಿರ್ ಖಾನ್ ಪಠಾಣರ ಹೆಸರು ಅಂತಿಮಗೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಅಧಿಕೃತವಾಗಿ ಘೋಷಣೆಯಾಗಲಿದೆ.
ಯಾಸಿರ್ ಖಾನ್ ಪಠಾಣ, ಒಮ್ಮತದ ಅಭ್ಯರ್ಥಿಯಾಗಿದ್ದು, ಇನ್ನುಳಿದ ಆಕಾಂಕ್ಷಿಗಳು ಯಾರಿಗೆ ಟಿಕೇಟ್ ನೀಡಿದರು ಸಹ ಒಗ್ಗಟ್ಟಿನಿಂದ ಕೆಲಸ ಮಾಡುವದಾಗಿ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅವರಿಗೆ ಮಾತು ಕೊಟ್ಟಿದ್ದು, ಪಠಾಣ ಸ್ಪರ್ಧೆ ತೀವ್ರ ಕುತೂಹಲ ಮೂಡಿಸಿದೆ.
