ಶಿಗ್ಗಾವ ಕ್ಷೇತ್ರಕ್ಕೆ ಕಾಂಗ್ರೇಸ್ ಅಭ್ಯರ್ಥಿಯಾಗಿ ಯಾಸಿರ್ ಖಾನ್ ಪಠಾಣ ನಾಳೆ ಮಧ್ಯಾಹ್ನ 1 ಘಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.
ನಾಮಪತ್ರ ಸಲ್ಲಿಕೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ, ಸಚಿವ ಜಮೀರ ಅಹ್ಮದ ಖಾನ್ ಬರಲಿದ್ದಾರೆಂದು ಎಂದು ಹೇಳಲಾಗಿದೆ.
ಶಿಗ್ಗಾವ ಕ್ಷೇತ್ರವನ್ನು ಪ್ರತಿಷ್ಟೆಯಾಗಿ ತೆಗೆದುಕೊಂಡಿರುವ ಕಾಂಗ್ರೇಸ್ ಶತಾಯಗತಾಯ ಗೆಲ್ಲಲೇಬೇಕೆಂದು ನಿರ್ಧರಿಸಿದ್ದಾರೆ.
ಯಾಸಿರ್ ಖಾನ್ ಪಠಾಣ, ಇಂದು ಬೆಂಗಳೂರಿನಲ್ಲಿ ಡಿ ಕೆ ಶಿವಕುಮಾರರಿಂದ ಬಿ ಫಾರ್ಮ್ ಸ್ವೀಕರಿಸಿದ್ದಾರೆ. ಈ ಸಂದರ್ಭದಲ್ಲಿ ಶಾಸಕ ಶ್ರೀನಿವಾಸ ಮಾನೆ, ಸೋಮಣ್ಣ ಬೇವಿನಮರದ, ಪ್ರೇಮಾ ಪಾಟೀಲ ಉಪಸ್ಥಿತರಿದ್ದರು.
