ಹುಬ್ಬಳ್ಳಿ ಗ್ರಾಮೀಣ ವ್ಯಾಪ್ತಿಯಲ್ಲಿ ಜೂಜಾಟದಲ್ಲಿ ತೊಡಗಿದ್ದ 31 ಜನರನ್ನು ಹುಬ್ಬಳ್ಳಿ ಗ್ರಾಮೀಣ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕುಸುಗಲ್, ಅಂಚಟಗೇರಿ, ಚೆನ್ನಾಪುರ, ಚೌರಗುಡ್ಡದಲ್ಲಿ ಜೂಜಾಟದಲ್ಲಿ ತೊಡಗಿದ್ದ 31 ಜನ ಸಿಕ್ಕು ಬಿದ್ದಿದ್ದು, ಅವರಿಂದ 83 ಸಾವಿರ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.
ಹುಬ್ಬಳ್ಳಿ ಗ್ರಾಮೀಣ ಇನ್ಸ್ಪೆಕ್ಟರ್ ಮುರುಗೇಶ ಚನ್ನಣ್ಣನವರ ಮಾರ್ಗದರ್ಶನದಲ್ಲಿ ಈ ದಾಳಿ ನಡೆದಿದೆ.
