ಬೆಳಗಾವಿ ಜಿಲ್ಲೆ ಯರಗಟ್ಟಿಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ರಫೀಕ್ ಡಿ ಕೆ ಇವರಿಗೆ ಯರಗಟ್ಟಿ ತಾಲೂಕಾ ಆಡಳಿತ ನೀಡುವ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದೆ.
ಕನ್ನಡಪರ ಚಳುವಳಿಯಲ್ಲಿ ಸಕ್ರಿಯರಾಗಿರುವ ರಫೀಕ್, ಸಾಮಾಜಿಕ ಕ್ಷೇತ್ರದಲ್ಲಿಯೂ ಹೆಸರು ಮಾಡಿದ್ದಾರೆ. ರಫೀಕ್ ಅವರಿಗೆ 2024 ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿ ಸಿಕ್ಕಿದ್ದು, ಹಲವು ಮಹನೀಯರು ಅಭಿನಂದನೆ ಸಲ್ಲಿಸಿದ್ದಾರೆ.
