ಜಾನಪದ ಕಲೆ ಮೈಗೂಡಿಸಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಜಾನಪದ ತಂಡದೊಂದಿಗೆ ಹೆಜ್ಜೆ ಹಾಕಿ ಗಮನ ಸೆಳೆದರು.
ಹೆಚ್.ಡಿ ಕೋಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಹಾಡಿಗಳಿಗೆ ಭೇಟಿ ನೀಡಿದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಹಿಳೆಯರ ಜೊತೆ ಹಾಡಿಗೆ ತಕ್ಕಂತೆ ಹೆಜ್ಜೆ ಹಾಕಿದ್ದು ವಿಶೇಷವಾಗಿತ್ತು.
ಹಾಡಿಯ ಜನರ ಜೊತೆ ಕೆಲ ಕಾಲ ಕಳೆದ ಮುಖ್ಯಮಂತ್ರಿ ಸಿದ್ದರಾಮಯ್ಯನವರು, ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದರು.