ಹದಿಮೂರು ವರ್ಷಗಳ ಬಳಿಕ ಮಲೆನಾಡಿನಲ್ಲಿ ಮತ್ತೆ ಕಾಣಿಸಿಕೊಂಡಿದ್ದ ನಕ್ಸಲ್ ಚಟುವಟಿಕೆ ಹತ್ತಿಕ್ಕುವಲ್ಲಿ ANF ಯಶಸ್ವಿಯಾಗಿದೆ.
ಪ್ರಮುಖ ನಕ್ಸಲ್ ಮುಖಂಡ ವಿಕ್ರಂ ಗೌಡನನ್ನು ಎನ್ ಕೌಂಟರ್ ಮಾಡಲಾಗಿದೆ. ದಿನಸಿ ವಸ್ತುಗಳನ್ನು ಪಡೆಯಲು ಗ್ರಾಮಕ್ಕೆ ಬಂದಂತ ಸಂದರ್ಭದಲ್ಲಿ ಐವರು ನಕ್ಸಲರು ANF ಪಡೆ ಮೇಲೆ ಗುಂಡಿನ ದಾಳಿ ನಡೆಸಿದ್ದು, ಪೊಲೀಸರು ನಡೆಸಿದ ಪ್ರತಿ ದಾಳಿಯಲ್ಲಿ ವಿಕ್ರಂ ಗೌಡ ಹತನಾಗಿದ್ದು, ಉಳಿದ ನಾಲ್ವರು ಪರಾರಿಯಾಗಿದ್ದಾರೆ.
