ರಾಜ್ಯದಲ್ಲಿ ನಡೆದ ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೇಸ್ ಜಯಭೇರಿ ಭಾರಿಸಿದ್ದು, ಕಾಂಗ್ರೇಸ್ ಅಭ್ಯರ್ಥಿಗಳ ಗೆಲುವಿಗೆ ಕಾರಣರಾದ ಮೂರು ಕ್ಷೇತ್ರಗಳ ಮತದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಮ್, ಶಿಗ್ಗಾವಿಯಲ್ಲಿ ಯಾಸಿರ್ ಖಾನ್ ಪಠಾಣ, ಚನ್ನಪಟ್ಟಣದಲ್ಲಿ ಸಿ ಪಿ ಯೋಗೇಶ್ವರ ಗೆಲುವು ಸಾಧಿಸಿದ್ದಾರೆ.
ಮೂರು ಕ್ಷೇತ್ರಗಳಲ್ಲಿ ಜನ ಕಾಂಗ್ರೇಸ್ ಸರ್ಕಾರ ಮಾಡುತ್ತಿರುವ ಅಭಿವೃದ್ಧಿಗೆ ಮುದ್ರೆ ಒತ್ತಿದ್ದಾರೆ, ಅಲ್ಲದೇ ಗ್ಯಾರೆಂಟಿ ಯೋಜನೆಗಳಿಗೆ ಬೆಂಬಲಿಸಿದ್ದಾರೆ ಎಂದು ಹೇಳಿದ್ದಾರೆ.