ಕರ್ನಾಟಕ ಸರ್ಕಾರ, ಕರ್ನಾಟಕ ಲೋಕಾಯುಕ್ತಕ್ಕೆ ಕೊಟ್ಟ ಅಧಿಕಾರದ ವ್ಯಾಪ್ತಿಯಲ್ಲಿಯೇ ಕೆಲಸ ಮಾಡುತ್ತಿದೆ ಎಂದು ಉಪ ಲೋಕಾಯುಕ್ತ ಕೆ ಎನ್ ಫಣಿಂದ್ರ ಹೇಳಿದ್ದಾರೆ.
ಧಾರವಾಡದಲ್ಲಿ ಪತ್ರಿಕಾಗೋಷ್ಟಿ ನಡೆಸಿ ಮಾತನಾಡಿದ ಅವರು, ಸರ್ಕಾರ ಲೋಕಾಯುಕ್ತಕ್ಕೆ ಮತ್ತಷ್ಟು ಅಧಿಕಾರ ಕೊಡಬೇಕು ಎಂದು ಅಭಿಪ್ರಾಯಪಟ್ಟರು.
ಧಾರವಾಡದಲ್ಲಿ ಮೂರು ದಿನಗಳ ಕಾಲ ಪ್ರವಾಸ ಕೈಗೊಂಡು, ಅನೇಕ ಸ್ಥಳಗಳಿಗೆ ಖುದ್ದು ಭೇಟಿ ನೀಡಿದ್ದೇವೆ. ಜನರ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಸೂಚಿಸಿದ್ದೇವೆ ಎಂದರು.
ಕೆಲಗೇರಿ ಕೆರೆ ಅಭಿವೃದ್ಧಿ ಮತ್ತು ಸ್ವಚ್ಛತೆಗೆ 20 ದಿನಗಳ ಸಮಯಾವಕಾಶ ಕೊಟ್ಟಿದ್ದು, ಪ್ರಗತಿಯ ವರದಿ ನೀಡುವಂತೆ ಹೇಳಿದ್ದೇವೆ ಎಂದರು. ಅಲ್ಲದೇ ಹುಬ್ಬಳ್ಳಿ ಧಾರವಾಡದಲ್ಲಿ ರಾಜ ಕಾಲುವೆ ಒತ್ತುವರಿ ಬಗ್ಗೆ ಕರ್ನಾಟಕ ಫೈಲ್ಸ್. ಕಾಮ್ ಲೋಕಾಯುಕ್ತರ ಗಮನ ಸೆಳೆದಾಗ, ಆ ಬಗ್ಗೆಯೂ ಕ್ರಮ ಕೈಗೊಳ್ಳಲಾಗುವದು ಎಂದರು.
ಕರ್ನಾಟಕ ಸರ್ಕಾರ, ಕರ್ನಾಟಕ ಲೋಕಾಯುಕ್ತಕ್ಕೆ ಬೇಕಿರುವಷ್ಟು ಸಿಬ್ಬಂದಿ ಕೊಟ್ಟಿದ್ದು, ಸರ್ಕಾರದ ಕಡೆಯಿಂದ ಅಸಹಕಾರವಾಗಲಿ, ಅಸಮಾಧಾನವಾಗಲಿ ಇಲ್ಲ ಎಂದರು. ಲೋಕಾಯುಕ್ತ ಪ್ರಕರಣದಲ್ಲಿ ಶೇಕಡಾ 25 ರಷ್ಟು ಜನರಿಗೆ ಶಿಕ್ಷೆ ವಿಧಿಸಲಾಗಿದೆ ಎಂದರು.