ಶಿಗ್ಗಾವ ಕ್ಷೇತ್ರದಲ್ಲಿ ಕಾಂಗ್ರೇಸ್ ಅಭ್ಯರ್ಥಿ ಯಾಸಿರ್ ಖಾನ್ ಪಠಾಣರ ಗೆಲುವಿಗೆ ಕಾರಣರಾದ ಮಾಜಿ ಶಾಸಕ ಅಜ್ಜಂಪೀರ ಖಾದ್ರಿಯವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಅಭಿನಂಧಿಸಿದ್ದಾರೆ.
ಹೈವೋಲ್ಟೇಜ್ ಕ್ಷೇತ್ರವಾಗಿದ್ದ ಶಿಗ್ಗಾವ ಕ್ಷೇತ್ರದ ಉಪ ಚುನಾವಣೆಯಲ್ಲಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಮಗ ಭರತರನ್ನು ಸೋಲಿಸಿ, ಪಠಾಣರ ಗೆಲುವಿಗೆ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ಕಾರಣವಾಗಿದ್ದಾರೆ.
ಈ ಸಂಬಂಧ ಅಜ್ಜಂಪೀರ ಖಾದ್ರಿಯವರನ್ನು ಸಿದ್ದರಾಮಯ್ಯ ಅಭಿನಂಧಿಸಿದ್ದಾರೆ.
ಖಾದ್ರಿಯವರಿಗೆ ಕರೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ನೀನು ಬಹಳ ಶ್ರಮ ಹಾಕಿದ್ದೀಯಾ, ನಿನಗೆ ಹಾಗೂ ಕಾರ್ಯಕರ್ತರಿಗೆ ನನ್ನ ಪರವಾಗಿ ಅಭಿನಂದನೆಗಳನ್ನು ತಿಳಿಸುವಂತೆ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೊತೆ ಮಾತನಾಡಿದ ಖಾದ್ರಿಯವರು, ನೀವು ನಗುತ್ತಾ ಇರಬೇಕು, ನಿಮಗಾಗಿ ಕ್ಷೇತ್ರ ತ್ಯಾಗ ಮಾಡಿದ್ದೇನೆ ಎಂದು ಹೇಳಿದ್ದಾರೆ.
