ರಾಜಕೀಯ ಪಕ್ಷವೊಂದು ತುಷ್ಟಿಕರಣದ ರಾಜಕಾರಣ ಮಾಡುತ್ತಿದೆ. ಮುಸ್ಲಿಮರಿಗೆ ಮತದಾನದ ಹಕ್ಕಿಲ್ಲದಂತೆ ಮಾಡಬೇಕು, ಆಗ ಎಲ್ಲವೂ ಸರಿಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರ ಸ್ವಾಮೀಜಿ ಹೇಳಿದ್ದಾರೆ.
ಬೆಂಗಳೂರಿನ ಫ್ರೀಡಂ ಪಾರ್ಕ್ನಲ್ಲಿ ಭಾರತೀಯ ಕಿಸಾನ್ ಸಂಘದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು ಈ ಹೇಳಿಕೆ ನೀಡಿದ್ದಾರೆ.
ಸ್ವಾಮೀಜಿ ಹೇಳಿಕೆ ಹಿಂದೆ ವಕ್ಫ ವಿಚಾರ ಅಡಗಿದರು, ಪರೋಕ್ಷವಾಗಿ ಚನ್ನಪಟ್ಟಣದ ಫಲಿತಾಂಶದ ಹಿನ್ನೆಲೆಯಲ್ಲಿ ಒಕ್ಕಲಿಗ ಸ್ವಾಮೀಜಿ ಈ ಹೇಳಿಕೆ ನೀಡಿದ್ದಾರೆ ಎಂದು ವಿಶ್ಲೇಷಣೆ ಮಾಡಲಾಗುತ್ತಿದೆ.
