ಶಿಗ್ಗಾವ ಸವಣೂರು ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೆಲುವಿಗೆ ಕಾರಣರಾಗಿರುವ ಮಾಜಿ ಶಾಸಕ ಅಜ್ಜಂಪೀರ್ ಖಾದ್ರಿ ನಾಳೆ ಹೆಸ್ಕಾಂ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.
ನಾಳೆ ಶುಕ್ರವಾರದಂದು ಮಧ್ಯಾಹ್ನ ಘಂಟೆಗೆ ಖಾದ್ರಿಯವರು ಅಧಿಕಾರ ಸ್ವೀಕಾರ ಮಾಡಲಿದ್ದು, ಅಲ್ಪಸಂಖ್ಯಾತ ಇಲಾಖೆ ಸಚಿವ ಜಮೀರ್ ಅಹ್ಮದ್ ಖಾನ್ ಸಹ ಆಗಮಿಸಲಿದ್ದಾರೆ.
