ಹೆಸ್ಕಾಂ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶಿಗ್ಗಾವಿ ಮಾಜಿ ಶಾಸಕ ಅಜ್ಜಂಪೀರ ಖಾದ್ರಿ ನಾಳೆ ಅಧಿಕಾರ ಸ್ವೀಕರಿಸಲಿದ್ದು, ಈ ಕಾರ್ಯಕ್ರಮಕ್ಕೆ ನಾಲ್ವರು ಮಂತ್ರಿಗಳು, ಹತ್ತಕ್ಕೂ ಹೆಚ್ಚು ಶಾಸಕರು ಸಾಕ್ಷಿಯಾಗಲಿದ್ದಾರೆ.
ನಾಳೆ ಮಧ್ಯಾಹ್ನ ನಡೆಯುವ ಅಧಿಕಾರ ಸ್ವೀಕಾರ ಸಮಾರಂಭದಲ್ಲಿ ಸಚಿವರಾದ ಜಮೀರ್ ಅಹ್ಮದ ಖಾನ್, ಎಚ್ ಕೆ ಪಾಟೀಲ, ಸತೀಶ ಜಾರಕಿಹೊಳಿ, ಶಿವಾನಂದ ಪಾಟೀಲ ಭಾಗವಹಿಸಲಿದ್ದಾರೆ.
ಅಲ್ಲದೇ ರಾಜ್ಯಸಭಾ ಸದಸ್ಯ ಸಯ್ಯದ ನಾಸೀರ್ ಹುಸೇನ್, ಶಾಸಕರಾದ, ಶ್ರೀನಿವಾಸ ಮಾನೆ, ಪ್ರಸಾದ ಅಬ್ಬಯ್ಯ, ಎನ್ ಎಚ್ ಕೋನರೆಡ್ಡಿ, ಬಸವರಾಜ ಶಿವಣ್ಣನವರ, ಯಾಸೀರ್ ಖಾನ್ ಪಠಾಣ, ಸೇರಿದಂತೆ ಹತ್ತಕ್ಕೂ ಹೆಚ್ಚು ಶಾಸಕರು ಆಗಮಿಸಲಿದ್ದಾರೆ.
ನಾಳಿನ ಸಮಾರಂಭಕ್ಕೆ ವಿವಿಧ ಧರ್ಮದ ಧರ್ಮ ಗುರುಗಳು, ಹಾಗೂ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ.
