ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇನ್ಮೇಲೆ ಕರ್ನಾಟಕ ರಾಜ್ಯ ಗ್ರಾಮೀಣ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಪತಿಯಾಗಿ ಕಾರ್ಯನಿರ್ವಹಿಸಲಿದ್ದಾರೆ.
ವಿಶ್ವ ವಿದ್ಯಾಲಯದ ಕುಲಪತಿ ಜವಾಬ್ದಾರಿ ನಿರ್ವಹಿಸುತ್ತಿದ್ದ ರಾಜ್ಯಪಾಲರ ಅಧಿಕಾರವನ್ನು ಕ್ಯಾಬಿನೆಟ್ ನಿರ್ಣಯ ಪಡೆದು ಮಿತಿಗೊಳಿಸಲಾಗಿದೆ.
ವಿಶ್ವವಿದ್ಯಾಲಯಗಳಿಗೆ ಉಪಕುಲಪತಿಗಳ ನೇಮಕದಲ್ಲಿ ರಾಜ್ಯಪಾಲರ ಅಧಿಕಾರವನ್ನು ಮೊಟಕುಗೊಳಿಸಿ, ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಕರಡು ಮಸೂದೆ-2024ಕ್ಕೆ ಸಚಿವ ಸಂಪುಟ ಸೆಪ್ಟೆಂಬರ್‌ನಲ್ಲಿ ಅನುಮೋದನೆ ನೀಡಲಾಗಿತ್ತು. ಈ ಸಲದ ವಿಧಾನಮಂಡಲ ಅಧಿವೇಶನದಲ್ಲಿ ಮಸೂದೆಯನ್ನು ತರಲು ಸಚಿವ ಸಂಪುಟ ನಿರ್ಧರಿಸಿದೆ.