Download Our App

Follow us

Home » ಆರೋಗ್ಯ » ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ. ಡ್ರಗ್ ಕಂಟ್ರೋಲರ್ ಉಮೇಶ್ ಸಸ್ಪೆಂಡ್

ಬಳ್ಳಾರಿಯಲ್ಲಿ ಬಾಣಂತಿಯರ ಸಾವಿನ ಪ್ರಕರಣ. ಡ್ರಗ್ ಕಂಟ್ರೋಲರ್ ಉಮೇಶ್ ಸಸ್ಪೆಂಡ್

ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿದೆ. 

ರಿಂಗರ್‌ ಲ್ಯಾಕ್ಟೇಟ್‌ ದ್ರಾವಣ ಪೂರೈಸಿರುವ ಪಶ್ಚಿಮ ಬಂಗಾಳದ ಕಂಪನಿಯನ್ನು ಕಪ್ಪು ಪಟ್ಟಿಗೆ ಸೇರಿಸಿ, ಕಂಪನಿ ವಿರುದ್ಧ ಕ್ರಿಮಿನಲ್‌ ಮೊಕದ್ದಮೆ ದಾಖಲಿಸಲು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ಮೃತ ಬಾಣಂತಿಯರ ಕುಟುಂಬಕ್ಕೆ ಸರ್ಕಾರದಿಂದ 2 ಲಕ್ಷ ರೂಪಾಯಿ ಪರಿಹಾರ ನೀಡಲಾಗಿದೆ. ಔಷಧಿ ಪೂರೈಸಿದ ಕಂಪನಿಯಿಂದಲೂ ಪರಿಹಾರವನ್ನು ವಸೂಲು ಮಾಡಿ ಕೊಡಲಾಗುವದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಸಂಭವಿಸಿರುವ ಈ ರೀತಿಯ ಸಾವಿನ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ಅಭಿವೃದ್ಧಿ ಆಯುಕ್ತರ ಅಧ್ಯಕ್ಷತೆಯಲ್ಲಿ ಸಮಿತಿಯನ್ನು ರಚಿಸಲು ನಿರ್ಧರಿಸಲಾಗಿದೆ ಎಂದ ಅವರು, ಬಾಣಂತಿಯರ ಸಾವಿನ ಕುರಿತು, ಸಮಿತಿ ರಚಿಸಿ ಘಟನೆಗಳ ಬಗ್ಗೆ ಪ್ರಾಥಮಿಕ ವರದಿ ಪಡೆಯಲಾಗಿದೆ ಎಂದರು. 

ಬಾಣಂತಿಯರಿಗೆ ನೀಡಲಾದ ರಿಂಗರ್ ಲ್ಯಾಕ್ಟೇಟ್ ದ್ರಾವಣದ ಎಲ್ಲಾ ಬ್ಯಾಚ್‌ಗಳ ಬಳಕೆಯನ್ನು ಹಿಂಪಡೆಯಲಾಗಿದೆ, ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಸಲಾದ ದ್ರಾವಣವನ್ನು ಪರೀಕ್ಷಿಸಲು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ತಮಿಳುನಾಡು ಮಾದರಿಯಲ್ಲಿ ಔಷಧಗಳ ಖರೀದಿ ಪ್ರಕ್ರಿಯೆ ಹಾಗೂ ಔಷಧ ನಿಯಂತ್ರಣ ಇಲಾಖೆಯನ್ನು ಪುನಾರಚನೆ ಮಾಡುವ ಬಗ್ಗೆ ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ ಎಂದರು.

ಇನ್ನು ಮುಂದೆ ಈ ರೀತಿಯ ದುರ್ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಮುಖ್ಯಮಂತ್ರಿಗಳು ಸೂಚನೆ ನೀಡಿದ್ದು, ಪ್ರಯೋಗಾಲಯದ ವರದಿ ಬಂದ ಬಳಿಕ ಘಟನೆಗೆ ಜವಾಬ್ದಾರರಾದ ಪ್ರತಿಯೊಬ್ಬರನ್ನು ಗುರುತಿಸಿ ಕ್ರಮ ಕೈಗೊಳ್ಳಲಾಗುವದು ಎಂದು ತಿಳಿಸಿದ್ದಾರೆ.

Karnataka Files
Author: Karnataka Files

Leave a Comment

RELATED LATEST NEWS

error: Content is protected !!