ರಾಜ್ಯ ಸರ್ಕಾರ, ಶನಿವಾರ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ವಕೀಲರಿಗೆ ಸಿಹಿ ಸುದ್ದಿ ನೀಡಿದೆ.
ಸರ್ಕಾರಿ ವಕೀಲರ ನೇಮಕಾತಿಯಲ್ಲಿ ಎಸ್ ಸಿ ಎಸ್ ಟಿ ಗಳಿಗೆ ಶೇಕಡಾ 24 ರಷ್ಟು ಮೀಸಲಾತಿ ಘೋಷಿಸಿ, ಆದೇಶ ಹೊರಡಿಸಿದೆ.
ಸಮಾಜ ಕಲ್ಯಾಣ ಇಲಾಖೆ ಶನಿವಾರ ಹೊರಡಿಸಿರುವ ಆದೇಶದಂತೆ ಪರಿಶಿಷ್ಟ ಜಾತಿಗೆ ಶೇಕಡಾ 17 ರಷ್ಟು ಮತ್ತು ಪರಿಶಿಷ್ಟ ಪಂಗಡಕ್ಕೆ ಶೇಖಡಾ 7 ರಷ್ಟು ಮೀಸಲಾತಿ ಘೋಷಿಸಲಾಗಿದೆ.