ವಕ್ಫ ವಿರುದ್ಧ ಹೋರಾಟ ನಡೆಸುತ್ತಿರುವ ವಿಜಯಪುರದ ಶಾಸಕ ಬಸನಗೌಡ ಪಾಟೀಲ ಯತ್ನಾಳಗೆ ಬಿಜೆಪಿ ಹೈಕಮಾಂಡ ಬಿಸಿ ಮುಟ್ಟಿಸಿದೆ.
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು, ಯತ್ನಾಳಗೆ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಬಿಜೆಪಿ ಶಿಸ್ತು ಸಮಿತಿ ಅಧ್ಯಕ್ಷರು ನೀಡಿರುವ ನೋಟಿಸ್‌ಗೆ ಉತ್ತರ ನೀಡುತ್ತೇನೆ, ಕರ್ನಾಟಕದಲ್ಲಿ ಬಿಜೆಪಿಯ ಪ್ರಸ್ತುತ ಸ್ಥಿತಿಯ ಬಗ್ಗೆ ವಾಸ್ತವಾಂಶವನ್ನು ಪ್ರಸ್ತುತಪಡಿಸುತ್ತೇನೆ. ಹಿಂದುತ್ವದ ಹೋರಾಟ, ಭ್ರಷ್ಟಾಚಾರದ ವಿರೋಧ, ವಕ್ಫ್ ಸಂಬಂಧಿತ ಸಮಸ್ಯೆಗಳು ಮತ್ತು ರಾಜವಂಶದ ರಾಜಕೀಯಕ್ಕೆ ನನ್ನ ಬದ್ಧತೆ ಅಚಲವಾಗಿ ಉಳಿಯುತ್ತದೆ ಎಂದು ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ