ರಾಜ್ಯದ ಹಿರಿಯ ಕೆ ಎ ಎಸ್ ಅಧಿಕಾರಿಯೊಬ್ಬರು, ಕೆಲಸಕ್ಕೆ ರಾಜೀನಾಮೆ ನೀಡಿ, ಆಧ್ಯಾತ್ಮದತ್ತ ಮುಖ ಮಾಡಿರುವ ಸಂಗತಿ ಬೆಳಕಿಗೆ ಬಂದಿದೆ.
ಮಂಡ್ಯ ಜಿಲ್ಲೆಯ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿರುವ ನಾಗರಾಜು ಎಂಬುವವರು ಕೆಲಸಕ್ಕೆ ರಾಜೀನಾಮೆ ನೀಡಿದ್ದಾರೆ. 13 ವರ್ಷಗಳ ಕಾಲ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು, ಆಧ್ಯಾತ್ಮಕತೆಯತ್ತ ಮುಖ ಮಾಡಿದ್ದಾರೆ.
ದಕ್ಷ ಅಧಿಕಾರಿ ಎಂದೇ ಹೆಸರು ಮಾಡಿದ್ದ ತುಮಕೂರು ಜಿಲ್ಲೆಯ ಹೊನ್ನೇನಹಳ್ಳಿ ಗ್ರಾಮದ ನಾಗರಾಜು ಅವರು ಸನ್ಯಾಸತ್ವದ ನಿರ್ಧಾರ ತೆಗೆದುಕೊಂಡಿದ್ದು ಅಚ್ಚರಿ ಮೂಡಿಸಿದೆ.