ಶೈಕ್ಷಣಿಕ ಕಾಶಿ ಧಾರವಾಡಕ್ಕೆ ಉತ್ತರ ಕರ್ನಾಟಕದ ಪ್ರತಿಷ್ಟಿತ ಸಹಕಾರಿ ಸಂಘ ಎಂಟ್ರಿ ಕೊಟ್ಟಿದೆ. ಬಿಜೆಪಿ ನಾಯಕ, ಮಾಜಿ ಸಚಿವ ಮುರುಗೇಶ ನಿರಾಣಿ ನೇತೃತ್ವದ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘ ಇಂದು ಉದ್ಘಾಟನೆಯಾಯ್ತು.
ವಿಜಯ ಸೌಹಾರ್ಧ ಕ್ರೆಡಿಟ್ ಸಹಕಾರಿ ಸಂಘದ 65 ನೇ ಶಾಖೆಯನ್ನು ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಜಗದೀಶ ಶೆಟ್ಟರ ಉದ್ಘಾಟಿಸಿದರು.
ಇದು 65 ನೇ ಶಾಖೆಯಾಗಿದ್ದು, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಅವರು ಉದ್ಘಾಟಿಸಿದರು. ಸಹಕಾರಿ ಕ್ಷೇತ್ರದ ಉಗಮಕ್ಕೆ ಕಾರಣವಾದ ಅವಿಭಾಜಿತ ಧಾರವಾಡ ಜಿಲ್ಲೆಯಲ್ಲಿ ಸಹಕಾರ ಸಂಘಗಳು ದೊಡ್ಡ ಹೆಜ್ಜೆ ಇಟ್ಟಿವೆ.
ಎರಡು ವರ್ಷಗಳ ಹಿಂದೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಹ ಧಾರವಾಡದಲ್ಲಿ ಸಿದ್ದಸಿರಿ ಸಹಕಾರ ಸಂಘ ಆರಂಭಿಸಿದ್ದು, ಇದೀಗ ಮುರುಗೇಶ ನಿರಾಣಿ ಧಾರವಾಡದಲ್ಲಿ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ 65 ನೇ ಶಾಖೆಯನ್ನು ಆರಂಭಿಸಿದ್ದಾರೆ.
ಈ ಸಂದರ್ಭದಲ್ಲಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕರಾದ ಅರವಿಂದ ಬೆಲ್ಲದ, ಮಹೇಶ ಟೆಂಗಿನಕಾಯಿ ಉಪಸ್ಥಿತರಿದ್ದರು.